ಬಂಧನ
ಬೆಂಗಳೂರು: ಅಕ್ರಮವಾಗಿ ಭಾರತೀಯ ಚುನಾವಣಾ ಗುರುತಿನ ಚೀಟಿ ಹೊಂದಿದ್ದ ನೇಪಾಳಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿ ಶೈಲೇಂದ್ರ ಕುಮಾರ್ ಮೀನಾ ಅವರ ದೂರಿನ ಮೇರೆಗೆ ರೇಖಾ ಎಂಬುವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಜುಲೈ 10ರಂದು ರೇಖಾ ಅವರು ನೇಪಾಳದಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ವಲಸಿಗರ ವಿಭಾಗದ ಅಧಿಕಾರಿಗಳು ಮಹಿಳೆಯ ದಾಖಲೆಗಳ ಪರಿಶೀಲನೆ ನಡೆಸಿದ ವೇಳೆ ನೇಪಾಳ ಹಾಗೂ ಭಾರತೀಯ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾಗಿವೆ.
ಈ ಬಗ್ಗೆ ಪ್ರಶ್ನಿಸಿದಾಗ ಹುಣಸೇಮಾರನಹಳ್ಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗುರುತಿನ ಚೀಟಿ ಮಾಡಿಕೊಟ್ಟಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ. ನೇಪಾಳ ದೇಶದ ನಾಗರಿಕರಾಗಿದ್ದರೂ ಭಾರತದ ಗುರುತಿನ ಚೀಟಿಯನ್ನು ಅಕ್ರಮವಾಗಿ ಪಡೆದುಕೊಂಡಿರುವ ಈಕೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.