ADVERTISEMENT

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಆರೋಪ– ದೂರು

​ಪ್ರಜಾವಾಣಿ ವಾರ್ತೆ
Published 13 ಮೇ 2020, 20:53 IST
Last Updated 13 ಮೇ 2020, 20:53 IST
ವೈದ್ಯಕೀಯ ಪರಿಕರಗಳು
ವೈದ್ಯಕೀಯ ಪರಿಕರಗಳು    

ಬೆಂಗಳೂರು: ‘ಕೊರೊನಾ ಸೋಂಕು ಹರಡುವಿಕೆ ತಡೆಯಲು ಔಷಧ ಮತ್ತು ವೈದ್ಯಕೀಯ ಉಪಕರಣಗಳನ್ನು ಖರೀದಿಸಿರುವ ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಸಂಸ್ಥೆ ಭಾರಿ ಅಕ್ರಮ ನಡೆಸಿದೆ’ ಎಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ, ಈ ಬಗ್ಗೆ ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.

‘ಪಿಪಿಇ ಕಿಟ್, ಕೊರೊನಾ ಪರೀಕ್ಷಾ ಕಿಟ್, ಸ್ಯಾನಿಟೈಸರ್, ಸಿರಿಂಜ್‌ ಮುಂತಾದ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕು. ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಸಂಸ್ಥೆ ನಡೆಸಿರುವ ಪೂರ್ಣ ವಹಿವಾಟು ಮತ್ತು ಈ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಅಧಿಕಾರಿಗಳ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT