ಬೆಂಗಳೂರು: ನಗರದ ವಿವಿಧೆಡೆ ಭಿಕ್ಷಾಟನೆ ನಡೆಸುತ್ತಿದ್ದ ನಾಲ್ವರು ಅಕ್ರಮ ವಲಸಿಗರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಶಮೀಮ್ ಅಹಮದ್, ನೂರ್‌ಜಾನ್, ಅಬ್ದುಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
‘ಠಾಣಾ ವ್ಯಾಪ್ತಿಯ ಬಿಸ್ಮಿಲಾನಗರದಲ್ಲಿ ನಾಲ್ವರು ಭಿಕ್ಷಾಟನೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಎಲ್ಲರೂ ಬಾಂಗ್ಲಾ ವಲಸಿಗರೆಂದು ವಿಚಾರಣೆಯಿಂದ ಗೊತ್ತಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.