ADVERTISEMENT

ಬೆಂಗಳೂರು: ರೆಮ್‌ಡಿಸಿವಿರ್ ಅಕ್ರಮ ಮಾರಾಟ, 55 ಚುಚ್ಚುಮದ್ದು ಜಪ್ತಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 5:25 IST
Last Updated 24 ಏಪ್ರಿಲ್ 2021, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಇದೀಗ 55 ಚುಚ್ಚುಮದ್ದು ಬಾಟಲಿಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ಮಾಡಿರುವ ಸಿಸಿಬಿ ಪೊಲೀಸರು, 16 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಇಬ್ಬರು, ವೈದ್ಯಕೀಯ ಔಷಧಿಗಳ ವಿತರಕರಾಗಿದ್ದಾರೆ. ಅವರೆಲ್ಲರ ವಿರುದ್ದ 6 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

ADVERTISEMENT

'ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳು, ₹10 ಸಾವಿರದಿಂದ ₹ 11 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಮತ್ತಷ್ಟು ಮಂದಿ ಇದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.