ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣ | ಅಕ್ರಮ ಸಾಗಣೆ: ₹ 67 ಲಕ್ಷ ಮೌಲ್ಯದ ಚಿನ್ನ ವಶ

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 5:30 IST
Last Updated 24 ಜನವರಿ 2022, 5:30 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನ   

ದೇವನಹಳ್ಳಿ: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಅಕ್ರಮವಾಗಿಸಾಗಿಸುತ್ತಿದ್ದ 1 ಕೆ.ಜಿ. 300 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ವಿದೇಶಗಳಿಂದ ಬೆಂಗಳೂರಿಗೆ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಗಳ ಕುರಿತು ಖಚಿತ ಮಾಹಿತಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಸುಮಾರು ₹67.59 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಡಿಆರ್‌ ಅಧಿಕಾರಿಗಳ ಖಚಿತ ಮಾಹಿತಿಯ ಮೇರೆ ಕಾರ್ಯಾಚರಣೆ ನಡೆಸಿದರು.

ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಎರಡು ಪ್ರಕರಣದಲ್ಲಿ ಅಂತರ ರಾಷ್ಟ್ರೀಯ ಪ್ರಯಾಣಿಕರಿಂದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಮತ್ತೊಂದು ಪ್ರಕರಣದಲ್ಲಿ ಅಧಿಕಾರಿಗಳನ್ನು ಮೋಸ ಮಾಡಿ ಚಿನ್ನ ಸಾಗಣೆ ಮಾಡಲು ಮುಂದಾಗಿದ್ದ ವ್ಯಕ್ತಿಯೂ ದುಬೈನಿಂದ ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ಪ್ರಯಾಣಬೆಳೆಸಿದ್ದ ಎನ್ನಲಾಗಿದ್ದು, ಕಸ್ಟಮ್ಸ್‌ ಅಧಿಕಾರಿಯ ಕಣ್ಗಾವಲಿನಲ್ಲಿ ಸಿಕ್ಕಿ ಬಿದಿದ್ದಾನೆ ಎಂದು ಮಾಹಿತಿ ದೊರೆತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.