ಬಂಧನ ( ಸಾಂಕೇತಿಕ ಚಿತ್ರ)
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ಅಕ್ರಮವಾಗಿ ನೆಲಸಿದ್ದ 10 ವಿದೇಶಿಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಜಾಲ, ಅಮೃತಹಳ್ಳಿ, ವಿದ್ಯಾರಣ್ಯಪುರ, ಗೋವಿಂದಪುರ, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ನೆಲಸಿದ್ದ ವಿದೇಶಿಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ವಲಸಿಗರ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.
‘ಅಕ್ರಮವಾಗಿ ನೆಲಸಿದ್ದ ವಿದೇಶಿಯರು ಅಪರಾಧ ಚಟುವಟಿಕೆಗಳಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನುವ ಮಾಹಿತಿ ಬಂದಿತ್ತು. ಆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದರು.
‘ಬಂಧಿತರ ಪೈಕಿ ಒಬ್ಬ ವಿದೇಶಿ ಪ್ರಜೆಯನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಯ(ಎಫ್‌ಆರ್‌ಆರ್‌ಒ) ಸೂಚನೆ ಮೇರೆಗೆ ಆತನ ದೇಶಕ್ಕೆ ಕಳುಹಿಸಲಾಗಿದೆ. ಉಳಿದವರನ್ನು ಎಫ್‌ಆರ್‌ಆರ್‌ಒ ಸೂಚನೆ ಮೇರೆಗೆ ಅವರ ದೇಶಗಳಿಗೆ ಕಳುಹಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.