ADVERTISEMENT

‘ನ್ಯಾಯಾಂಗ ನಿಂದನೆ ಮೊಕದ್ದಮೆ ಏಕೆ ದಾಖಲಿಸಿಕೊಳ್ಳಬಾರದು?’

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 20:11 IST
Last Updated 5 ಸೆಪ್ಟೆಂಬರ್ 2019, 20:11 IST

ಬೆಂಗಳೂರು: ‘ಅಕ್ರಮವಾಗಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ನಿಮ್ಮ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳಬಾರದು’ ಎಂದು ಹೈಕೋರ್ಟ್‌ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಿಗೆ ಪ್ರಶ್ನಿಸಿದೆ.

‘ಈ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಿ’ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಆದೇಶಿಸಿದೆ.

ವಿಚಾರಣೆಯನ್ನು ಅಕ್ಟೋಬರ್‌ 11ಕ್ಕೆ ಮುಂದೂಡಲಾಗಿದೆ.

ADVERTISEMENT

‘ಮಾಗಡಿ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಚಯದ ಬಳಿ ಒಂದು ಎಕರೆಗೂ ಹೆಚ್ಚು ವಿಸ್ತಾರದ ಉದ್ಯಾನದಲ್ಲಿ ಅನಧಿಕೃತವಾಗಿ ಸಾಯಿಬಾಬಾ ದೇವಸ್ಥಾನ ನಿರ್ಮಿಸಲಾಗಿದೆ’ ಎಂದು ಆರೋಪಿಸಿ ಈ ಅರ್ಜಿ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.