ADVERTISEMENT

ಭ್ರೂಣ ಲಿಂಗ ಪತ್ತೆ | ಕಠಿಣ ಕಾನೂನು ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಐಎಂಎ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 14:28 IST
Last Updated 16 ಡಿಸೆಂಬರ್ 2023, 14:28 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ‘ಭ್ರೂಣ ಲಿಂಗ ಪತ್ತೆ ತಡೆಗೆ ಸಂಬಂಧಿಸಿದಂತೆ ಕಠಿಣ ಕಾನೂನನ್ನು ಜಾರಿಗೊಳಿಸಬೇಕು. ಈ ರೀತಿಯ ಕಾನೂನು ಬಾಹಿರ ಪದ್ಧತಿಗಳು ಸಮಾಜಕ್ಕೆ ಹಾಗೂ ವೈದ್ಯಕೀಯ ವೃತ್ತಿಗೆ ಹಾನಿಕರ’ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ರಾಜ್ಯ ಶಾಖೆ ಕಳವಳ ವ್ಯಕ್ತಪಡಿಸಿದೆ.

ಸಂಘದ ಅಧ್ಯಕ್ಷ ಡಾ.ಎಸ್. ಶ್ರೀನಿವಾಸ್, ‘ಮೈಸೂರು, ಮಂಡ್ಯ, ಹೊಸಕೋಟೆ ಮತ್ತು ಬೆಂಗಳೂರಿನಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯ ಪ್ರಕರಣಗಳು ವೈದ್ಯಕೀಯ ಕ್ಷೇತ್ರದ ವ್ಯಾಪಕ ಕೊಳಕು ದುಷ್ಕೃತ್ಯಗಳನ್ನು ಬಹಿರಂಗಪಡಿಸಿದೆ. ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಇಂತಹ ಕೃತ್ಯಗಳಲ್ಲಿ ತೊಡಗುವುದನ್ನು ಎಂದಿಗೂ ನಾವೂ ಬೆಂಬಲಿಸುವುದಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

‘ಭ್ರೂಣ ಲಿಂಗ ಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು. ಕೆಪಿಎಂಇ ಕಾಯ್ದೆಯಡಿ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ) ನಕಲಿ ವೈದ್ಯರನ್ನು ಗುರುತಿಸಿ, ಅವರ ಮೇಲೂ ಕಾನೂನಿನ ಅಡಿ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. 

‘ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಾನೂನು ಕ್ರಮಗಳ ಜತೆಗೆ ಜಾಗೃತಿ ಮೂಡಿಸುವ ಕೆಲಸವೂ ಆಗಬೇಕು. ಹೆಣ್ಣು–ಗಂಡು ಸಮಾನ ಎಂದು ಸಾರಿ, ಮಹಿಳೆಯರನ್ನು ಗೌರವಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.