ADVERTISEMENT

ಇಮ್ರಾನ್‌ ಪಾಷಾ, ಬೆಂಬಲಿಗರಿಗೆ ದಂಡ

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 21:51 IST
Last Updated 16 ಜುಲೈ 2020, 21:51 IST

ಬೆಂಗಳೂರು: ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಕಾರಣಕ್ಕೆ ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಮತ್ತು 21 ಜನರಿಗೆ ಹೈಕೋರ್ಟ್‌ ತಲಾ ₹5 ಸಾವಿರ ದಂಡ ವಿಧಿಸಿದೆ.

‘ಈ ಮೊತ್ತವನ್ನು ಮುಖ್ಯಮಂತ್ರಿಗಳ ಕೋವಿಡ್‌–19 ಪರಿಹಾರ ನಿಧಿಗೆ ಪಾವತಿಸಬೇಕು’ ಎಂದು ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ ಶಾಸ್ತ್ರಿ ಅವರಿದ್ದ ಏಕ ಸದಸ್ಯ ಪೀಠ ಆದೇಶಿಸಿದೆ.

ಜಾಮೀನು ಕೋರಿ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೂ, ಹೈಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ‌ನೀಡಿದ್ದಾರೆ. ಏಳು ದಿನಗಳಲ್ಲಿ ಎಲ್ಲರೂ ದಂಡ ಪಾವತಿಸಬೇಕು ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.