ADVERTISEMENT

ಜುಲೈ 6ಕ್ಕೆ ‘ಭಕ್ತರ ಭಂಡಾರದ ಕುಟೀರ’ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:28 IST
Last Updated 3 ಜುಲೈ 2025, 15:28 IST
ಎಚ್.ಎಂ. ರೇವಣ್ಣ
ಎಚ್.ಎಂ. ರೇವಣ್ಣ   

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿಯಲ್ಲಿ ನಿರ್ಮಿಸಿರುವ ಕಾಗಿನೆಲೆ ಕನಕಗುರು ಪೀಠದ ಶಾಖಾ ಮಠದ ‘ಭಕ್ತರ ಭಂಡಾರದ ಕುಟೀರ’ ಉದ್ಘಾಟನಾ ಕಾರ್ಯಕ್ರಮ ಜುಲೈ 5 ಮತ್ತು 6ರಂದು ನಡೆಯಲಿದೆ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ಹೇಳಿದರು.

ದೊಡ್ಡ ಆಲದ ಮರದ ಹತ್ತಿರದ ಕೇತೋಹಳ್ಳಿಯಲ್ಲಿ ₹6 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶಾಖಾ ಮಠದ ಗುರು ಪ್ರವೇಶ ಮತ್ತು ಧಾರ್ಮಿಕ ಸಭೆ ಜುಲೈ 5ರ ಸಂಜೆ 6 ಗಂಟೆಗೆ ನಡೆಯಲಿದ್ದು, ಕೈಲಾಸಾಶ್ರಮ ಮಠದ ಜಯೇಂದ್ರಪುರಿ ಸ್ವಾಮೀಜಿ ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು ಸಾನಿಧ್ಯ ವಹಿಸುವರು. 6ರಂದು ಬೀರೇಂದ್ರ ಕೇಶವ ತಾರಕಾನಂದಪುರಿ 19ನೇ ವರ್ಷದ ಪುಣ್ಯಾರಾಧನೆಯ ಸ್ಮರಣಾರ್ಥ ‘ಭಕ್ತರ ಭಂಡಾರದ ಕುಟೀರ’ ಉದ್ಘಾಟನೆಯಾಗಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಿಗ್ಗೆ 11ಕ್ಕೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಖಾ ಮಠ ಉದ್ಘಾಟಿಸುವರು. ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು. ಹೊಸದುರ್ಗದ ಕನಕ ಗುರುಪೀಠ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಭಾಗವಹಿಸುವರು ಎಂದರು.

ADVERTISEMENT

ಮೂರು ಅಂತಸ್ತಿನ ಶಾಖಾ ಮಠದಲ್ಲಿ ಪ್ರತಿ ಶನಿವಾರ ಸತ್ಸಂಗ, 4ನೇ ಶನಿವಾರ ಸಮಾಜದ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಗೋಷ್ಠಿಯಲ್ಲಿ ಮಠದ ಟ್ರಸ್ಟಿ ರಘುನಾಥರಾವ್ ಮಲ್ಕಾಪೂರೆ, ಕಾಗಿನೆಲೆ ಕನಕ ಗುರುಪೀಠದ ಕಾರ್ಯದರ್ಶಿ ಮಂಜಪ್ಪ, ರಾಮಚಂದ್ರಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.