ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು, ನಿರ್ವಹಣೆ, ಮನೋವಿಜ್ಞಾನ, ಪ್ರದರ್ಶನ ಕಲೆಗಳು ಸೇರಿದಂತೆ ವಿವಿಧ ಕೋರ್ಸ್‌ಗಳನ್ನು ಭಾನುವಾರ ಉದ್ಘಾಟಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್.ದೊರೆಸ್ವಾಮಿ ಮಾತನಾಡಿ, ‘ಉದ್ಯೋಗದಲ್ಲಿ ಉತ್ತಮ ವೇತನವನ್ನು ಬಯಸುವುದು ಸಹಜ. ಅಷ್ಟಕ್ಕೇ ಸೀಮಿತಗೊಳ್ಳದೆ ಮೌಲ್ಯಗಳಿಗೂ ಒತ್ತು ನೀಡಬೇಕು. ಕ್ಯಾಂಪಸ್‌ನಲ್ಲಿ ಮೌಲ್ಯಾಧಾರಿತ ಶಿಕ್ಷಣ ದೊರೆಯುಂತಹ ವಾತಾವರಣ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಭಾರತದ ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಅರ್ಥಮಾಡಿಕೊಳ್ಳಬೇಕು. ನೈತಿಕ ಮೌಲ್ಯಗಳ ಕೊರತೆಯಿಂದಾಗಿಯೇ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ ಎಂದು ವಿಶ್ಲೇಷಿಸಿದರು.
ವಿದ್ಯಾರ್ಥಿಗಳು ಜ್ಞಾನದ ಜೊತೆಗೆ, ಯಶಸ್ಸಿನ ಬೆನ್ನು ಹತ್ತಬೇಕು. ಸ್ಪರ್ಧೆ ಮತ್ತು ಮಹತ್ವಾಕಾಂಕ್ಷೆಯ ಜೊತೆಗೆ ಸಹೋದರ ತತ್ವವನ್ನು ಕಾಪಾಡಿಕೊಳ್ಳಬೇಕು. ಘನತೆಯ ಬದುಕು ಮತ್ತು ಸಹ ನಾಗರಿಕರನ್ನು ಗೌರವಿಸುವ ಗುಣ ಇರಬೇಕು ಎಂದು ಸಲಹೆ ನೀಡಿದರು.
ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ ಶ್ರೇಯಸ್ ಹೊಸೂರ್ ಅತಿಥಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.