ಬೆಂಗಳೂರು: ತೀವ್ರ ಚರ್ಚೆಗೆ ಕಾರಣವಾದ ‘ಕರ್ನಾಟಕ ಭೂಸುಧಾರಣೆಗಳ (ಎರಡನೇ ತಿದ್ದುಪಡಿ), ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ಮಸೂದೆ ಸೇರಿದಂತೆ ಒಟ್ಟು 12 ಮಸೂದೆಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವವರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ 1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಯನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಮೂಲಕ, ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದು.
ತಿದ್ದುಪಡಿ ಮಸೂದೆಯಲ್ಲಿ 1961 ಕಾಯ್ದೆ 79ಎ, 79ಬಿ, 79 ಸಿ ಪ್ರಕರಣಗಳನ್ನು ಕೈಬಿಡಲು ಪ್ರಸ್ತಾವವಿದೆ. ‘ಎ’ ವರ್ಗದ ನೀರಾವರಿ ಭೂಮಿಯು ಕೃಷಿ ಉದ್ದೇಶಕ್ಕೆ ಮಾತ್ರ ಮಾರಾಟ ಮಾಡುವ ಪ್ರಸ್ತಾವವಿದೆ.
ಮಂಡನೆಯಾದ ಇತರ ಮಸೂದೆಗಳು: ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮಸೂದೆ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಮಸೂದೆ, ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ಮಸೂದೆ, ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆ, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಕಾನೂನು (ತಿದ್ದುಪಡಿ) ಮಸೂದೆ, 2020 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಸಂಬಳಗಳು ಮಸೂದೆ, 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಮಸೂದೆ, ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ಮಸೂದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.