ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಅಂಗವಿಕಲರಿಗೆ ನೀಡುವ ಮಾಸಾಶನವನ್ನು ಏಕರೂಪದಲ್ಲಿ ₹ 6 ಸಾವಿರಕ್ಕೆ ಹೆಚ್ಚಳ ಮಾಡಬೇಕು’ ಎಂದು ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಅರುಣಕುಮಾರ ಎಸ್., ‘ನೆರೆಯ ರಾಜ್ಯಗಳಾದ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಅಂಗವಿಕಲರಿಗೆ ₹ 4,500 ಮಾಸಾಶನ ಒದಗಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ₹ 800ರಿಂದ ₹ 1400 ಮಾತ್ರ ನೀಡಲಾಗುತ್ತಿದೆ. ಅಂಗವಿಕಲರು ಸ್ವಾವಲಂಬಿ ಜೀವನ ನಡೆಸಲು ಮಾಸಾಶನವನ್ನು ಸರ್ಕಾರ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.
‘ಅಂಗವಿಕಲರಿಗೆ ರಾಜಕೀಯ ಮೀಸಲಾತಿ ನೀಡಬೇಕು. ಅವರಿಗೆ ಹಾಗೂ ಅವರ ಮಕ್ಕಳಿಗೆ ಉನ್ನತ ಶಿಕ್ಷಣದಲ್ಲಿ ವ್ಯಾಸಂಗಕ್ಕೆ ಮೀಸಲಾತಿ ಒದಗಿಸಬೇಕು. ಪ್ರತ್ಯೇಕ ಸಚಿವಾಲಯ ಸ್ಥಾಪನೆ, ಉಚಿತ ಬಸ್ ಪಾಸ್ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.