ADVERTISEMENT

ಸ್ವಾತಂತ್ರ್ಯ ದಿನ; 15 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ

independence day

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 20:30 IST
Last Updated 7 ಆಗಸ್ಟ್ 2019, 20:30 IST
   

ಬೆಂಗಳೂರು: ‘73ನೇ ಸ್ವಾತಂತ್ರ್ಯ ದಿನಾಚರಣೆಗೆ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಈ ಬಾರಿ15 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದು ಜಿಲ್ಲಾಧಿಕಾರಿಕೆ. ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಆ. 15ರ ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸದ್ದಾರೆ. ಈ ವೇಳೆ ವಾಯುಪಡೆಯು ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಿದೆ. ಬಳಿಕ ಆಕರ್ಷಕ ಕವಾಯತು ನಡೆಯಲಿದ್ದು, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಎನ್‍ಸಿಸಿ, ಸೇವಾದಳ ಸೇರಿದಂತೆ ವಿವಿಧ ಶಾಲೆ ಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಬಿಬಿಎಂಪಿ ಮತ್ತು ಸರ್ಕಾರಿ ಶಾಲೆಯ 1,200 ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಪಾಸ್ ಹೊಂದಿದ್ದವರಿಗೆ ಮಾತ್ರ ಪ್ರವೇಶ. ಗಣ್ಯರು, ರಕ್ಷಣಾ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಹಿತಕರ ಘಟನೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಸಾರ್ವಜನಿಕರಿಗೆ7,000 ಆಸನ ಗಳ ವ್ಯವಸ್ಥೆ ಮಾಡಲಾಗಿದ್ದು,ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಕಂದಾಯ ಭವನದಲ್ಲಿನ ದಕ್ಷಿಣ
ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪಾಸ್ ವಿತರಿಸಲಾಗುವುದು’ ಎಂದರು.

‘ಪ್ರಾಣಿಗಳ ಸಾಗಣೆಗೆ ಅನುಮತಿ ಅಗತ್ಯ’

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳ ಜತೆಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. ‘ಪಶುಸಂಗೋಪನಾ ಇಲಾಖೆ ಹಾಗೂ ಸಕ್ಷಮ ಪ್ರಾಧಿಕಾರ ದಿಂದ ಅನುಮತಿ ಪಡೆಯದೆ ಗೋವು ಸೇರಿದಂತೆ ಇತರೆ ಪ್ರಾಣಿಗಳ ಸಾಗಣೆ ಮಾಡಬಾರದು’ ಎಂದು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.

‘ಬಕ್ರೀದ್ ಬಲಿದಾನದ ಹಬ್ಬವಾಗಿದ್ದು, ಪ್ರಾಣಿ ಬಲಿಗೆ ಅವಕಾಶ ನೀಡ ಬೇಕು. ಪ್ರಾಣಿ ಸಾಗಣೆ ವೇಳೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

‘ಪ್ರಾಣಿಗಳನ್ನು ಕಡಿಯುವವರು ನಿಯಮ ಪಾಲಿಸಬೇಕು. ಪಶುಸಂಗೋಪನಾ ಇಲಾಖೆಯಿಂದಲೂ ಅನುಮತಿ ಪಡೆಯಬೇಕಿದೆ. ನಿಯಮ ಉಲ್ಲಂಘಿಸಿ ಸಾಗಾಟ ಮಾಡಲು ಹಾಗೂ ಕಡಿಯಲು ಅವಕಾಶವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಅಂಕಿ–ಅಂಶಗಳು

1,200: ಆಸನಗಳು ಅತಿಗಣ್ಯ ವ್ಯಕ್ತಿಗಳಿಗೆ ಮೀಸಲು


750: ಆಸನಗಳು ಸ್ವಾತಂತ್ರ್ಯ ಹೋರಾಟಗಾರರು/ಗಣ್ಯವ್ಯಕ್ತಿಗಳಿಗೆ


2,500: ಆಸನಗಳು ವಿವಿಧ ಇಲಾಖೆಯ ಅಧಿಕಾರಿಗಳಿಗೆ


7000:ಆಸನಗಳು ಸಾರ್ವಜನಿಕರಿಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.