ADVERTISEMENT

ಸ್ವಾತಂತ್ರ್ಯ ದಿನಾಚರಣೆ | ಆ. 16, 17, 18ರಂದು ರಾಜಭವನ ವೀಕ್ಷಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 1:29 IST
Last Updated 13 ಆಗಸ್ಟ್ 2025, 1:29 IST
   

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆ. 16, 17 ಮತ್ತು 18ರಂದು ರಾಜಭವನ ವೀಕ್ಷಣೆಗೆ ಸಂಜೆ 6 ರಿಂದ 7.30ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ವೀಕ್ಷಣೆಗೆ ಆಗಮಿಸುವವರು ಸರ್ಕಾರದಿಂದ ನೀಡಿರುವ ಗುರುತಿನ ಕಾರ್ಡ್ ಕಡ್ಡಾಯವಾಗಿ ತರಬೇಕು. ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು. ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT