
ಬೆಂಗಳೂರು: ‘ಭಾರತ ಜಿಡಿಪಿಯಲ್ಲಿ ಮುಂದಿದ್ದರೂ ಮಾನವ ಹಕ್ಕುಗಳಲ್ಲಿ ಹಿಂದಿನ ಸ್ಥಾನ ಪಡೆಯಲು ಕಾರಣವೇನು’ ಬಗ್ಗೆ ಯುನಿವರ್ಸಲ್ ಸ್ಕೂಲ್ ಆಫ್ ಲಾ ವತಿಯಿಂದ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮವನ್ನು ಡಿ.9ರಂದು ಕಬ್ಬನ್ ಪಾರ್ಕ್‌ನಲ್ಲಿರುವ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ಅಧ್ಯಕ್ಷ ಯು.ಆರ್. ಉಪೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾ. ಅಶೋಕ ಬಿ. ಹಿಂಚಿಗೇರಿ, ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸೀನಿಯರ್ ಫೆಲೋ ಸಲೀಲ್ ಶೆಟ್ಟಿ, ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟೇಷನ್ ನಿರ್ದೇಶಕಿ ಮೀರಾ ಕೃಷ್ಣಪ್ಪ ಭಾಗವಹಿಸಲಿದ್ದಾರೆ.
https://forms.gle/DW7S7HrMuAwW23yK7 ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.