ADVERTISEMENT

ಲಸಿಕೆ ಅಭಿಯಾನದಲ್ಲಿ ಭಾರತ ಮುಂದು: ಡಿ.ವಿ. ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 21:52 IST
Last Updated 28 ಜೂನ್ 2021, 21:52 IST
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ   

ಬೆಂಗಳೂರು: ದೇಶದಲ್ಲಿ 32.66 ಕೋಟಿ ಜನರಿಗೆ ಕೋವಿಡ್‌ ಲಸಿಕೆಗಳನ್ನು ನೀಡಿದ್ದು, ಲಸಿಕೆ ಆಂದೋಲನದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ವಿಶ್ವದಲ್ಲೇ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಿದ ದೇಶವಾಗಿ ಭಾರತ ಹೊರಹೊಮ್ಮಿದೆ ಎಂದು ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಇ–ಚಿಂತನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೆ ದೇಶದಲ್ಲಿ ಏಳು ರೆಮಿಡಿಸಿವಿರ್‌ ಉತ್ಪಾದನಾ ಘಟಕಗಳಿದ್ದವು. ನರೇಂದ್ರ ಮೋದಿ ಅವರ ವಿಶೇಷ ಮುತುವರ್ಜಿಯಿಂದ ಮತ್ತು ಔಷಧ ಕಂಪನಿಗಳ ಜತೆ ಮಾತುಕತೆ ನಡೆಸಿದ್ದರಿಂದ ರೆಮಿಡಿಸಿವಿರ್‌ ಉತ್ಪಾದನಾ ಘಟಕಗಳ ಸಂಖ್ಯೆ 17 ಕ್ಕೆ ಏರಿದೆ. ಕೋವಿಡ್‌ನ ಸಮರ್ಥ ನಿರ್ವಹಣೆಗೆ ಇದು ಸಹಕರಿಸಿದೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಆರೋಗ್ಯ ಸಮಸ್ಯೆ ನಿವಾರಣೆಗೆ ನೆರವಾಗುವ ದೃಷ್ಟಿಯಿಂದ ಮುಂಚೂಣಿ ಯೋಧರನ್ನಾಗಿ ಬಿಜೆಪಿ ಕಾರ್ಯಕರ್ತರನ್ನು ತರಬೇತಿಗೊಳಿಸಲಾಗುತ್ತಿದೆ. ಕರ್ನಾಟಕದಿಂದ 1.20 ಲಕ್ಷ ಕಾರ್ಯಕರ್ತರನ್ನು ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.