ADVERTISEMENT

ಬೆಂಗಳೂರು– ಭಾರತ v/s ದಕ್ಷಿಣ ಆಫ್ರಿಕಾ ಟಿ20 ಪಂದ್ಯ: ರಾತ್ರಿ 1 ಗಂಟೆ ತನಕ ಮೆಟ್ರೊ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 11:07 IST
Last Updated 16 ಜೂನ್ 2022, 11:07 IST
ಮೆಟ್ರೊ
ಮೆಟ್ರೊ   

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಭಾನುವಾರಜೂ.19ರಂದು ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಅಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ ವಿಸ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ಧರಿಸಿದೆ.

ಕೊನೆ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆಗಳಿಂದ ಅಂದು ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಹೊರಡಲಿವೆ ಎಂದು ತಿಳಿಸಿದೆ.

ಪೇಪರ್ ಟಿಕೆಟ್

ADVERTISEMENT

‘ವಾಪಸ್ ಹೋಗುವ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದ್ದು, ನೂಕುನುಗ್ಗಲು ತಪ್ಪಿಸಲು ಮುಂಚಿತವಾಗಿಯೇ ಪೇಪರ್ ಟಿಕೆಟ್‌ಗಳನ್ನು ನೀಡಲಾಗುವುದು. ಮಧ್ಯಾಹ್ನ 3 ಗಂಟೆಯಿಂದಲೇ ಪೇಪರ್ ಟಿಕೇಟ್‌ಗಳು ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಲಭ್ಯವಾಗಲಿವೆ. ₹50 ದರದ ಪೇಪರ್‌ ಟಿಕೆಟ್‌ ಪಡೆದವರು ಕಬ್ಬನ್ ಪಾರ್ಕ್ ಮೆಟ್ರೊ ರೈಲು ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 10 ಗಂಟೆ ನಂತರ ಪ್ರಯಾಣಿಸಬಹುದು’ ಎಂದು ವಿವರಿಸಿದೆ.

‘ಪಂದ್ಯಾವಳಿ ನೋಡಲು ಬರುವಾಗ ಎಂದಿನಂತೆ ಸ್ಮಾರ್ಟ್‌ಕಾರ್ಡ್‌ ಮತ್ತು ಟೋಕನ್‌ಗಳನ್ನು ಪಡೆದು ಪ್ರಯಾಣಿಸಬೇಕು. ವಾಪಸ್ ಹೋಗಲು ಪೇಪರ್ ಟಿಕೆಟ್‌ಗಳನ್ನು ಮಾತ್ರ ಬಳಸಲು ಅವಕಾಶ ಇದೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.