ADVERTISEMENT

ಇಂಡಿಗೊ ವಿಮಾನಗಳ ಸಂಚಾರ ವ್ಯತ್ಯಯ: ವ್ಯಕ್ತಿಯೊಬ್ಬರ ಮದುವೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 23:53 IST
Last Updated 4 ಡಿಸೆಂಬರ್ 2025, 23:53 IST
<div class="paragraphs"><p>ಇಂಡಿಗೊ ವಿಮಾನಗಳು (ಸಾಂದರ್ಭಿಕ ಚಿತ್ರ)</p></div>

ಇಂಡಿಗೊ ವಿಮಾನಗಳು (ಸಾಂದರ್ಭಿಕ ಚಿತ್ರ)

   

ಬೆಂಗಳೂರಿನ ವ್ಯಕ್ತಿಯೊಬ್ಬರ ವಿವಾಹ ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ನಿಗದಿಯಾಗಿತ್ತು. ಇಂಡಿಗೊ ವಿಮಾನಗಳ ಸಂಚಾರ ವ್ಯತ್ಯಯ ಮತ್ತು ರದ್ದತಿಯಿಂದಾಗಿ ಮದುವೆಯನ್ನೇ ಮುಂದೂಡುವ ಅನಿವಾರ್ಯ ಎದುರಾಗಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿದ ವರನ ತಂದೆ ಮಹೇಶ್, ‘ಭುವನೇಶ್ವದಲ್ಲಿ ಶುಕ್ರವಾರ ನಿಗದಿಯಾಗಿದ್ದ ನನ್ನ ಮಗನ ಮದುವೆಗೆ ತೆರಳಲು ಇಂಡಿಗೊ ವಿಮಾನದಲ್ಲಿ ಮುಂಗಡವಾಗಿ 110 ಟಿಕೆಟ್‌ಗಳನ್ನು ಕಾಯ್ದಿರಿಸಿದ್ದೆವು. ಆದರೆ, ಕಳೆದೆರಡು ದಿನಗಳಿಂದ ವಿಮಾನಗಳ ಸಂಚಾರ ವ್ಯತ್ಯಯ ಮತ್ತು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಚರಿಸಬೇಕಿರುವ ವಿಮಾನ ಸೇವೆ ಲಭ್ಯವಿರಲಿದೆಯೇ ಎಂಬುದನ್ನು ತಿಳಿದುಕೊಳ್ಳಲು ಬಂದಿದ್ದೆ. ಈ ಕುರಿತು ಸಿಬ್ಬಂದಿಯೊಂದಿಗೆ ಎರಡು ಗಂಟೆ ಚರ್ಚಿಸಿದ್ದೇನೆ. ಆದರೆ, ವಿಮಾನ ಸೇವೆ ಲಭ್ಯವಿರಲಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. 

ADVERTISEMENT

ವಿಮಾನ ರದ್ದಾಗಿರುವುದರಿಂದ ಮದುವೆ ಮುಂದೂಡಬೇಕಾಗಿದೆ. ನಮಗಾಗಿ ವಧುವಿನ ಕಡೆಯವರು ಭುವನೇಶ್ವರದಲ್ಲಿ ಮದುವೆ ಸಿದ್ಧತೆ ಮಾಡಿಕೊಂಡಿದ್ದರು. ಅವರಿಗೆ ಏನು ಉತ್ತರ ಹೇಳಬೇಕೊ ಗೊತ್ತಾಗುತ್ತಿಲ್ಲ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.