ADVERTISEMENT

ವಾಹನಗಳ ತಪಾಸಣೆ: ಶುಕ್ರವಾರ 73 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 20:23 IST
Last Updated 27 ಸೆಪ್ಟೆಂಬರ್ 2024, 20:23 IST
<div class="paragraphs"><p>FIR</p></div>

FIR

   

ಬೆಂಗಳೂರು: ಸಾರಿಗೆ ಇಲಾಖೆ ಮತ್ತು ಸಂಚಾರ ವಿಭಾಗದ ಪೊಲೀಸರನ್ನು ಒಳಗೊಂಡ ಜಂಟಿ ತಂಡಗಳು ಶುಕ್ರವಾರ ವಾಹನಗಳನ್ನು ತಪಾಸಣೆ ನಡೆಸಿ ತೆರಿಗೆ ಪಾವತಿಸದ 31 ಪ್ರಕರಣಗಳಲ್ಲಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿವೆ.

ನೀರು ಪೂರೈಕೆ ಮಾಡುವ ಟ್ಯಾಂಕರ್‌ ವಾಹನಗಳ ಮಾಲೀಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿಲ್ಲ, ಅರ್ಹತಾ ಪತ್ರ, ರಹದಾರಿ ಪತ್ರ, ಚಾಲನಾ ಪರವಾನಗಿ ಪಡೆಯದೇ ಕಾರ್ಯಾಚರಿಸುತ್ತಿವೆ ಎಂಬ ಮಾಹಿತಿಯನ್ನು ಆಧರಿಸಿ ಜಂಟಿ ಸಾರಿಗೆ ಆಯುಕ್ತರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ADVERTISEMENT

300ಕ್ಕೂ ಅಧಿಕ ವಾಹನಗಳ ತಪಾಸಣೆ ನಡೆಯಿತು. 73 ವಾಹನಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತೆರಿಗೆ ಪಾವತಿಸದ 31 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.