ಬೆಂಗಳೂರು: ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನೇತೃತ್ವ ವಹಿಸಿರುವ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ ಕೃಷ್ಣ ಅವರನ್ನು ತನಿಖಾಧಿಕಾರಿ ಸ್ಥಾನದಲ್ಲಿ ಮುಂದುವರಿಸಲು ಕೋರಿರುವ ಪ್ರಸ್ತಾವ ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಎ.ವೈ.ವಿ ಕೃಷ್ಣ ಅವರ ಮುಂದುವರಿಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಕೃಷ್ಣ ಅವರನ್ನು ಮುಂದುವರಿಸುವಂತೆ ಕೋರಿದ ಮತ್ತು ಈ ಕುರಿತ ಪ್ರಗತಿಯ ಕಡತ ಕೇಂದ್ರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಸಚಿವಾಲಯದ ಮುಂದಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ನ್ಯಾಯಪೀಠ, ‘ಪ್ರಕರಣದ ತನಿಖೆ ಎಂದಿನಂತೆ ಮುಂದುವರಿಯಲಿ’ ಎಂದು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.