ADVERTISEMENT

ಬೆಂಗಳೂರು: ಇಂದಿರಾ ಕ್ಯಾಂಟೀನ್ ಸುತ್ತ ಸ್ವಚ್ಛತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 20:39 IST
Last Updated 13 ಸೆಪ್ಟೆಂಬರ್ 2025, 20:39 IST
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ಕೆ.ವಿ. ರಾಜೇಂದ್ರ ಅವರು ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಿದರು
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ಕೆ.ವಿ. ರಾಜೇಂದ್ರ ಅವರು ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಿದರು   

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಒಳಗೆ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ಕೆ.ವಿ. ರಾಜೇಂದ್ರ ಸೂಚಿಸಿದರು.

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ, ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಿದ ನಂತರ, ಸ್ವಚ್ಛತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾರ್ಡ್ 35ರ ಪೌರಕಾರ್ಮಿಕರ ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟ ಆಯುಕ್ತರು, ಪೌರಕಾರ್ಮಿಕರ ಹಾಜರಾತಿ ಪರಿಶೀಲಿಸಿ, ಅವರೊಡನೆ ಸಮಾಲೋಚಿಸಿ, ಸಿಬ್ಬಂದಿಗೆ ವ್ಯವಸ್ಥಿತವಾಗಿ ತ್ಯಾಜ್ಯ ನಿರ್ವಹಣೆ ಮಾಡಲು ಹೇಳಿದರು.

ADVERTISEMENT

ಹೆಚ್ಚುವರಿ ಆಯುಕ್ತ ದಿಗ್ವಿಜಯ್ ಬೋಡ್ಕೆ ಅವರು ವಾರ್ಡ್ 162ರ ಗಿರಿನಗರದ ಆಟಿ ಟಿಪ್ಪರ್ ಮಸ್ಟರಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಮಸ್ಟರಿಂಗ್ ಸ್ಥಳಕ್ಕೆ ಬರುವಂತೆ ಸೂಚಿಸಿದರು.

ವಾರ್ಡ್ 198 ಆದರ್ಶ ಲೇಔಟ್, ವಾರ್ಡ್ 126 ಮಾರುತಿ ಮಂದಿರ, ವಾರ್ಡ್ 101 ರ ಕೆ.ಎಚ್.ಬಿ ಕಾಲೊನಿ, ಸಿದ್ದಯ್ಯ ಪುರಾಣಿಕ ರಸ್ತೆ, ವಾರ್ಡ್ 156 ರ ಗಾಳಿ ಆಂಜನೇಯ ರಸ್ತೆ, ವಿಜಯನಗರ ವಿಭಾಗ, ಗೋವಿಂದರಾಜ ನಗರ, ವಿದ್ಯಾಪೀಠ ವಾರ್ಡ್‌ನಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.