ADVERTISEMENT

ಇಂಟಿಗ್ರೇಟೆಡ್‌ ಟೌನ್‌ಶಿಪ್‌ | ವರ್ಷದೊಳಗೆ ಕಾಮಗಾರಿ ಆರಂಭ: ಸಚಿವ ಬೈರತಿ ಸುರೇಶ್‌

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2025, 16:25 IST
Last Updated 14 ಮಾರ್ಚ್ 2025, 16:25 IST
ಬೈರತಿ ಸುರೇಶ್‌
ಬೈರತಿ ಸುರೇಶ್‌   

ಕೆಜಿಎಫ್‌ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಇಂಟಿಗ್ರೇಟೆಡ್‌ ಟೌನ್‌ಶಿಪ್‌ ಕಾಮಗಾರಿಯನ್ನು ವರ್ಷದೊಳಗೆ ಆರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಭರವಸೆ ನೀಡಿದರು.

ಕಾಂಗ್ರೆಸ್‌ನ ಎಂ. ರೂಪಕಲಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಜಿಎಫ್‌, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ ಮತ್ತು ತುಮಕೂರಿನ ವಸಂತನರಸಾಪುರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಇಂಟಿಗ್ರೇಟೆಡ್‌ ಟೌನ್‌ಶಿಪ್‌ಗಳನ್ನು ನಿರ್ಮಿಸುವುದಾಗಿ 2024–25ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಕೆಜಿಎಫ್‌ನ ಬಂಗಾರದ ಗಣಿ ಗ್ರಾಮದಲ್ಲಿ ಈ ಉದ್ದೇಶಕ್ಕೆ 294 ಎಕರೆ ಜಮೀನು ಕಾಯ್ದಿರಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ’ ಎಂದರು.

ಟೌನ್‌ಶಿಪ್‌ನಲ್ಲಿ ಸಾಫ್ಟ್‌ವೇರ್‌, ಹಾರ್ಡ್‌ವೇರ್‌ ಕಂಪನಿಗಳು, ಆಸ್ಪತ್ರೆ, ಶಾಲಾ- ಕಾಲೇಜುಗಳನ್ನು ಒಂದೇ ಕಡೆ ಸ್ಥಾಪಿಸಲಾಗುವುದು. ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಸಮೀಪದಲ್ಲೇ ಈ ಟೌನ್‌ಶಿಪ್‌ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.