
ಪ್ರಜಾವಾಣಿ ವಾರ್ತೆ
ಕೆಎಸ್‌ಆರ್‌ಟಿಸಿ ಬಸ್‌ಗಳು (ಸಾಂದರ್ಭಿಕ ಚಿತ್ರ)
ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಆರ್‌ಟಿಸಿಗಳ ನಡುವಿನ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಜ.31ರವರೆಗೆ ಅವಕಾಶ ನೀಡಲಾಗಿತ್ತು. ಇದನ್ನು ಫೆ.28ರವರೆಗೆ ವಿಸ್ತರಿಸಲಾಗಿದೆ.
ಮೇಲ್ವಿಚಾರಕರು (ದರ್ಜೆ–3), ನೌಕರರು (ದರ್ಜೆ–4) ವರ್ಗಾವಣೆಗೆ ಜ.28ರ ಸಂಜೆ 5.30ರ ಒಳಗೆ ಆನ್‌ಲೈನ್ ಮೂಲಕ (www.ksrtc.org/transfer) ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.