ADVERTISEMENT

ಸಾಲದ ಮೇಲಿನ ಬಡ್ಡಿ ಮನ್ನಾ ಆದೇಶ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 20:25 IST
Last Updated 24 ಫೆಬ್ರುವರಿ 2020, 20:25 IST

ಬೆಂಗಳೂರು: ಸಹಕಾರ ಸಂಘ, ಬ್ಯಾಂಕ್‌ಗಳಿಂದ ಪಡೆದಿದ್ದ ಕೃಷಿ ಸಾಲದ ಮೇಲಿನ ಅಸಲನ್ನು ಮಾರ್ಚ್ 31ರ ಒಳಗೆ ಪಾವತಿಸಿದರೆ ರಾಜ್ಯ ಸರ್ಕಾರ ಬಡ್ಡಿ ಮನ್ನಾ ಮಾಡಲಿದೆ. ಈ ಸಂಬಂಧ ಸಹಕಾರ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಿಂದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲದ ಮೇಲಿನ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಸೌಲಭ್ಯ ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಇದಕ್ಕಾಗಿ ಸುಮಾರು ₹450 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.