ADVERTISEMENT

ಟೋಲ್‌ ಸಂಗ್ರಹಕ್ಕೆ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 20:30 IST
Last Updated 9 ಡಿಸೆಂಬರ್ 2019, 20:30 IST
   

ಬೆಂಗಳೂರು: ಬೆಂಗಳೂರು-ದೊಡ್ಡಬಳ್ಳಾಪುರ ಮಧ್ಯದ ರಾಜ್ಯ ಹೆದ್ದಾರಿ ಯಲ್ಲಿ ಟೋಲ್ ಸಂಗ್ರಹ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಈ ಕುರಿತಂತೆ ದೊಡ್ಡಬಳ್ಳಾಪುರದ ವಕೀಲ ಜಿ. ವೆಂಕಟೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ರವಿ ಮಳಿಮಠ ಮತ್ತು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಲೋಕೋಪಯೋಗಿ ಇಲಾಖೆ ವಿಶೇಷಾಧಿಕಾರಿ ಮತ್ತು ‘ಯಲಹಂಕ ಎ ಪಿ ಬಾರ್ಡರ್ ಟೋಲ್ ಹೈವೇಸ್ ಪ್ರೈ.ಲಿ’ ಕಂಪನಿಗೆ ಟೋಲ್‌ ಸಂಗ್ರಹಿಸದಂತೆ ಮಧ್ಯಂತರ ನಿರ್ದೇಶನ ನೀಡಿತು.

ಪ್ರಕರಣವೇನು?

ADVERTISEMENT

‘ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ಪೂರ್ಣ ಗೊಳ್ಳದಿದ್ದರೂ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಅರ್ಜಿ ದಾರರು ಆರೋಪಿಸಿದ್ದರು. ವಿಚಾರಣೆ ನಡೆಸಿದ್ದ ಪೀಠ, ‘ಕಾಮ ಗಾರಿ ಪರಿಶೀಲಿಸಿ ಎಂಜಿನಿಯರ್ ನೀಡುವ ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.

ಸರ್ಕಾರದ ಪರ ವಕೀಲರು ವರದಿ ಸಲ್ಲಿಸಿ, ‘ಕಾಮಗಾರಿ ಶೇ 75ರಷ್ಟು ಪೂರ್ಣ ಗೊಂಡಿದೆ’ ಎಂದರು. ಇದನ್ನು ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ. ದಳವಾಯಿ ಆಕ್ಷೇಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.