ADVERTISEMENT

ಒಳಮೀಸಲಾತಿ: ಶೀಘ್ರ ಜಾರಿಗೆ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಸಮಿತಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 19:44 IST
Last Updated 21 ಜೂನ್ 2025, 19:44 IST
<div class="paragraphs"><p>ನಾಗಮೋಹನದಾಸ್‌</p></div>

ನಾಗಮೋಹನದಾಸ್‌

   

ಬೆಂಗಳೂರು: ‘ಪರಿಶಿಷ್ಟ ಜಾತಿಯಡಿ ಒಳಮೀಸಲಾತಿಗೆ ಕೈಗೊಂಡಿರುವ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಿಸದೆ, ಲಭ್ಯವಿರುವ ದತ್ತಾಂಶದ ಅನ್ವಯ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು’ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಸಮಿತಿಯು ಸರ್ಕಾರಕ್ಕೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ್ ಕೌತಾಳ್, ‘ನಿವೃತ್ತ ನ್ಯಾ.ಎಚ್‌.ಎನ್‌. ನಾಗಮೋಹನದಾಸ್‌ ಅಧ್ಯಕ್ಷತೆಯ ಏಕಸದಸ್ಯ ವಿಚಾರಣಾ ಆಯೋಗವು ಕೆಲ ಜಿಲ್ಲೆಗಳಲ್ಲಿ ಶೇ 100 ರಷ್ಟು ಸಮೀಕ್ಷೆ ಪೂರ್ಣಗೊಳಿಸಿದೆ. ಆಯೋಗದ ಪ್ರಕಾರ ಒಟ್ಟಾರೆ ರಾಜ್ಯದಲ್ಲಿ ಶೇ 91ರಿಂದ 92 ರಷ್ಟು ಸಮೀಕ್ಷೆಯಾಗಿದೆ. ಆದ್ದರಿಂದ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಹೇಳಿದರು.

ADVERTISEMENT

‘ಬೆಂಗಳೂರು ನಗರದಲ್ಲಿ ಸಮೀಕ್ಷೆಗೆ ಒಳಪಟ್ಟವರ ಶೇಕಡಾವಾರು ಸಂಖ್ಯೆ ಕಡಿಮೆ ಇರುವ ಕಾರಣ, ಈ ಹಿಂದೆ ಎರಡು ಬಾರಿ ಸಮೀಕ್ಷೆಯ ಕಾಲಾವಧಿ ವಿಸ್ತರಿಸಲಾಗಿದೆ. ಆದರೂ ಜನರು ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳುತ್ತಿಲ್ಲ. ಆದ್ದರಿಂದ ಪುನಃ ಸಮೀಕ್ಷೆಯ ಕಾಲಾವಧಿ ವಿಸ್ತರಣೆ ಮಾಡುವುದು ಸರಿಯಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.