ADVERTISEMENT

ಮಹಿಳಾ ಉದ್ಯಮಿಗಳಿಗೆ ಡಿಜಿಟಲ್ ವೇದಿಕೆ: ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 19:31 IST
Last Updated 6 ಮಾರ್ಚ್ 2020, 19:31 IST
ಬೆಂಗಳೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳಾ ಉದ್ಯಮಿಗಳು –ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳಾ ಉದ್ಯಮಿಗಳು –ಪ್ರಜಾವಾಣಿ ಚಿತ್ರ   

ಬೆಂಗಳೂರು:ಮಹಿಳಾ ಉದ್ಯಮಿಗಳ ಒಕ್ಕೂಟದ ಎಲ್ಲ ಕೆಲಸವನ್ನು ಡಿಜಿಟಲ್‌ ವೇದಿಕೆಯಡಿ ತರಲು ಇಲಾಖೆಯಿಂದ ಸಂಪೂರ್ಣ ನೆರವು ನೀಡುವುದಾಗಿ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ಯಮಿಗಳ ಒಕ್ಕೂಟ (ಯುಬಿಯುಎನ್‌ಟಿಯು) ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಾಗದ ಪತ್ರದಲ್ಲಿ ನಡೆಯುತ್ತಿರುವ ಒಕ್ಕೂಟದ ಎಲ್ಲ ಕಾರ್ಯಗಳನ್ನು ಒಂದೇ ಡಿಜಿಟಲ್‌ ವೇದಿಕೆಗೆ ತರಲು ಐಟಿ-ಬಿಟಿ ಇಲಾಖೆ ಸಂಪೂರ್ಣ ನೆರವು ನೀಡುತ್ತದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆರ್ಥಿಕ ವಲಯದಲ್ಲಿ ಕಾನೂನು ಸುಧಾರಣೆ ತಂದು ಸುಲಭವಾಗಿ ವ್ಯವಹಾರ ನಡೆಸುವುದಕ್ಕೆ ಒತ್ತು ನೀಡಿದ್ದಾರೆ’ ಎಂದರು.

ADVERTISEMENT

ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಯುಬಿಯುಎನ್‌ಟಿಯು ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.