ADVERTISEMENT

International Womens Day | ಮಾ. 8 ರಂದು ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 19:49 IST
Last Updated 3 ಮಾರ್ಚ್ 2023, 19:49 IST
   

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್ 8ರಂದು ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ಬಿಎಂಟಿಸಿ ಮುಂದಾಗಿದೆ.

ಈ ಸಂಬಂಧ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಸಂಸ್ಥೆಯ ಎಲ್ಲಾ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಮಹಿಳೆಯರಿಗೆ ಅವಕಾಶ ನೀಡಬಹುದಾಗಿದೆ. ಇದರಿಂದ ಸರ್ಕಾರದ ಜನಪ್ರಿಯತೆ ಹೆಚ್ಚಾಗಲಿದೆ. ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಿದಂತೆ ಆಗಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT