ADVERTISEMENT

ಆನ್‌ಲೈನ್–ಭೌತಿಕ ವೇದಿಕೆಗಳಲ್ಲಿ ಯೋಗಾಭ್ಯಾಸ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 6:35 IST
Last Updated 22 ಜೂನ್ 2021, 6:35 IST
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಾಭ್ಯಾಸ –ಪ್ರಜಾವಾಣಿ ಚಿತ್ರ
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಾಭ್ಯಾಸ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಗರದಾದ್ಯಂತ ವಿವಿಧ ಕಾರ್ಯಕ್ರಮಗಳನ್ನುಸೋಮವಾರ ಹಮ್ಮಿಕೊಳ್ಳಲಾಗಿತ್ತು. ಈ ಬಾರಿ ಸಾರ್ವಜನಿಕ ಕಾರ್ಯಕ್ರಮಗಳಿಗಿಂತ ಆನ್‌ಲೈನ್‌ ವೇದಿಕೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದವು.

ಪ್ರತಿವರ್ಷದಂತೆ ಉದ್ಯಾನಗಳು, ಮೈದಾನಗಳು ಹಾಗೂ ಇತರ ತೆರೆದ ಪ್ರದೇಶಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮಗಳು ವಿರಳವಾಗಿದ್ದವು. ವಿವಿಧ ಸಂಸ್ಥೆಗಳು ಆನ್‌ಲೈನ್‌ ಮೂಲಕವೇ ಯೋಗ ದಿನಕ್ಕೆ ಚಾಲನೆ ನೀಡಿದವು.

ಹಲವು ಶಿಕ್ಷಣ ಸಂಸ್ಥೆಗಳೂ ಆನ್‌ಲೈನ್‌ ಮೂಲಕ ಹಮ್ಮಿಕೊಂಡಿದ್ದ ಯೋಗ ದಿನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಯೋಗ ಮಾಡಿದರು. ಬಹುತೇಕರುತಮ್ಮ ಮನೆಯಂಗಳದಲ್ಲೇ ಯೋಗಾಭ್ಯಾಸ ನಡೆಸಿದರು.

ADVERTISEMENT

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಯೋಗ ದಿನದ ಅಂಗವಾಗಿಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬೆಳಿಗ್ಗೆ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಬಳಿಕ ನಡೆದ ಆನ್‌ಲೈನ್‌ ಕಾರ್ಯಕ್ರಮದಲ್ಲಿಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯ ಕುಲಾಧಿಪತಿಎಚ್.ಆರ್.ನಾಗೇಂದ್ರ, ರಾಜೀವ್‌ ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಎಸ್‌.ಎಂ.ಜಯಕರ, ಎನ್.ರಾಮಕೃಷ್ಙ ರೆಡ್ಡಿ, ಬಿ.ವಸಂತ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಯೋಗ ದಿನದಲ್ಲಿಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ನಟಿ ಅನು ಪ್ರಭಾಕರ್ ಭಾಗವಹಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕಾದ ಜೀವನಶೈಲಿಯ ಕುರಿತು ವೈದ್ಯ ಡಾ.ಆಂಜನಪ್ಪ ಮಾರ್ಗದರ್ಶನ ನೀಡಿದರು.

ದಿಶಾ ಭಾರತ್, ಯೂತ್ ಫಾರ್ ಸೇವಾ,ರಾಷ್ಟ್ರೋತ್ಥಾನ ಪರಿಷತ್‌ನ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿಪ್ರಶಾಂತಿ ಆಯುರ್ವೇದ ಕೇಂದ್ರದ ಮುಖ್ಯಸ್ಥ ಡಾ.ಗಿರಿಧರ ಕಜೆ, ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ ಉಪನ್ಯಾಸ ನೀಡಿದರು.

ಎಪಿಎಸ್‌ಎಜುಕೇಷನಲ್ ಟ್ರಸ್ಟ್‌ನ ಕಾರ್ಯಕ್ರಮದಲ್ಲಿ ಯೋಗ ಗುರು ಎಸ್‌.ಶಂಕರ್ ಭಾಗವಹಿಸಿದ್ದರು.ಪ್ರೀತೀಸ್ ವೆಲ್‌ನೆಸ್ ಯೋಗ ವತಿಯಿಂದ ಆನ್‌ಲೈನ್‌ ಮೂಲಕ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪತಂಜಲಿ ಯೋಗ ಶಿಕ್ಷಣ ಸಮಿತಿ,ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ‌, ಬೆಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ನೇರಪ್ರಸಾರದ ಮೂಲಕ ಯೋಗಾಭ್ಯಾಸ, ಸಂವಾದ, ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವು.

ಅಂಚೆ ಚೀಟಿಗಳಿಗೆ ಯೋಗ ಮುದ್ರೆ: ಯೋಗ ದಿನದ ಅಂಗವಾಗಿಜಯನಗರ, ರಾಜಾಜಿನಗರ, ಜಾಲಹಳ್ಳಿ, ಬಸವನಗುಡಿ ಸೇರಿದಂತೆ ಅಂಚೆ ಇಲಾಖೆಯ ಹಲವು ಪ್ರಧಾನ ಕಚೇರಿಗಳಲ್ಲಿ ಸೋಮವಾರ ಬಟವಾಡೆಯಾದ ಅಂಚೆ ಪತ್ರಗಳಿಗೆ ವಿಶೇಷ ಯೋಗ ಮುದ್ರೆ ಒತ್ತುವ ಮೂಲಕ ಯೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.