ADVERTISEMENT

ಅಂತರರಾಜ್ಯ ಪೆಡ್ಲರ್‌ಗಳ ಬಂಧನ: ₹ 15 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 3:34 IST
Last Updated 5 ಜನವರಿ 2021, 3:34 IST
   

ಬೆಂಗಳೂರು: ಡ್ರಗ್ಸ್ ಮಾರಾಟ ಹಾಗೂ ಸಾಗಣೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರದ ಸಿಸಿಬಿ ಪೊಲೀಸರು, ಮತ್ತೊಂದು ಡ್ರಗ್ಸ್ ಮಾರಾಟ ಜಾಲವನ್ನು ಭೇದಿಸಿದ್ದಾರೆ.

ಮೂವರು ಅಂತರರಾಜ್ಯ ಪೆಡ್ಲರ್‌ಗಳನ್ನು ಬಂಧಿಸಿರುವ ಪೊಲೀಸರು, ₹ 15 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

'ಕೇರಳದ ರಮೇಶ್ (28), ಎಂ.ಸಿ.ಆಶೀರ್ (32) ಹಾಗೂ ಶಹಾಜೀನ್ (19) ಬಂಧಿತರು. 200 ಗ್ರಾಂ ತೂಕದ ಎಂಡಿಎಂಎ, 150 ಗ್ರಾಂ ತೂಕದ ಹ್ಯಾಶಿಷ್ ಎಣ್ಣೆ ಹಾಗೂ ಮೂರು ಮೊಬೈಲ್ ಜಪ್ತಿ ಮಾಡಲಾಗಿದೆ' ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು‌.

ADVERTISEMENT

'ಹೊರರಾಜ್ಯಗಳಿಂದ ಡ್ರಗ್ಸ್ ತರುತ್ತಿದ್ದ ಆರೋಪಿಗಳು, ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಬಂದಿದ್ದ ಸಂದರ್ಭದಲ್ಲೇ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.'

'ಕರ್ನಾಟಕ, ಕೇರಳ ಹಾಗೂ ಇತರೆ ರಾಜ್ಯಗಳಲ್ಲೂ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ ಇದೆ. ತನಿಖೆ ಮುಂದುವರಿದಿದೆ' ಎಂದೂ ಅವರು ತಿಳಿಸಿದರು.

ಬಂಧಿತ ಆರೋಪಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.