ADVERTISEMENT

ಕಾಂಗ್ರೆಸ್ ನಾಯಕರ ಆತ್ಮಾವಲೋಕನ

​ಪ್ರಜಾವಾಣಿ ವಾರ್ತೆ
Published 23 ಮೇ 2019, 19:54 IST
Last Updated 23 ಮೇ 2019, 19:54 IST
   

ಬೆಂಗಳೂರು: ಲೋಕಸಭೆ ಚುನಾವಣೆಯ ಅನಿರೀಕ್ಷಿತ ಫಲಿತಾಂಶದಿಂದ ಚಿಂತಿತರಾಗಿರುವ ಕಾಂಗ್ರೆಸ್‌ನ ಪ್ರಮುಖ ನಾಯಕರು ಗುರುವಾರ ತಡರಾತ್ರಿ ತುರ್ತು ಸಭೆ ನಡೆಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಫಲಿತಾಂಶದ ಬಗ್ಗೆ ಆತ್ಮಾವಲೋಕನ ನಡೆಸಿದರು.

ಮೈತ್ರಿ ಅಭ್ಯರ್ಥಿಗಳ ಹೀನಾಯ ಸೋಲಿಗೆ ಕಾರಣವೇನು, ಮೋದಿ ಅಲೆ ರಾಜ್ಯದಲ್ಲಿ ಅಷ್ಟೊಂದು ಪರಿಣಾಮಕಾರಿಯಾಗಿ ಕೆಲಸ ಮಾಡಿದೆಯೇ, ಮೈತ್ರಿಯಿಂದ ಪಕ್ಷಕ್ಕೆ ನಷ್ಟವಾಯಿತೇ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಸಿದರು.

ADVERTISEMENT

ಮೈಸೂರು, ಬಾಗಲಕೋಟೆ, ಚಾಮರಾಜನಗರ, ಕೊಪ್ಪಳದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿದ್ದರಾಮಯ್ಯ ರೂಪಿಸಿದ್ದ ಕಾರ್ಯತಂತ್ರ ವಿಫಲವಾಗಿದೆ. ಕ್ಷೇತ್ರ ಹಂಚಿಕೆ ವೇಳೆ ಮೈಸೂರು ಕ್ಷೇತ್ರಕ್ಕೆ ಸಿದ್ದರಾಮಯ್ಯ ಪಟ್ಟುಹಿಡಿದಿದ್ದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬರುವುದಾಗಿ ವಾಗ್ದಾನ ನೀಡಿದ್ದರು. ಕೊಪ್ಪಳ, ಬಾಗಲಕೋಟೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ಹೊತ್ತಿದ್ದರು. ಈ ಬಗ್ಗೆ ನಾಯಕರು ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.