ADVERTISEMENT

ಕಾಲ್ತುಳಿತ | ಹಾಲಿ ನ್ಯಾಯಮೂರ್ತಿಯಿಂದ ತನಿಖೆಯಾಗಲಿ: ಕೋಡಿಹಳ್ಳಿ ಚಂದ್ರಶೇಖರ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 14:34 IST
Last Updated 9 ಜೂನ್ 2025, 14:34 IST
<div class="paragraphs"><p>ಆರ್‌ಸಿಬಿ ಸಂಭ್ರಮಾಚರಣೆ ಹಾಗೂ ‌ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಚಿತ್ರಗಳು</p></div>

ಆರ್‌ಸಿಬಿ ಸಂಭ್ರಮಾಚರಣೆ ಹಾಗೂ ‌ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಚಿತ್ರಗಳು

   

ಕೃಪೆ: ಪಿಟಿಐ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕಣದ ತನಿಖೆಯನ್ನು ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ADVERTISEMENT

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯ ಮರೆಮಾಚುವುದನ್ನು ನಿಲ್ಲಿಸಬೇಕು. ಐಪಿಎಲ್ ಸಾವಿರಾರು ಕೋಟಿಯ ಜೂಜಾಟವಾಗಿದ್ದು, ಕೇಂದ್ರ ಸರ್ಕಾರ ಇದರ ಮೇಲೆ ನಿಯಂತ್ರಣ ಹೇರಬೇಕು. ಆರ್‌ಸಿಬಿ ಪ್ರಾಂಚೈಸಿಯಿಂದ ಮೃತರ ಕುಟುಂಬಕ್ಕೆ ಇನ್ನೂ ಹೆಚ್ಚಿನ ಪರಿಹಾರವನ್ನು ಸರ್ಕಾರ ಕೊಡಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಮಾತನಾಡಿ, ಕರ್ನಾಟಕದ ಕ್ರೀಡಾ ಇತಿಹಾಸದಲ್ಲೇ ಇಂತಹ ದುರಂತ ನಡೆದಿರಲಿಲ್ಲ. ಆರ್‌ಸಿಬಿ ಪ್ರಾಂಚೈಸಿ ಅಥವಾ ಆಟಗಾರರು ಸೌಜನ್ಯಕ್ಕಾದರೂ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ವೀರಭದ್ರ ಸ್ವಾಮಿ, ಕಾರ್ಮಿಕ ಸಂಘಟನೆಯ ಮುಖಂಡ ಅರುಣ್‌ ಕುಮಾರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.