ADVERTISEMENT

ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 19:40 IST
Last Updated 27 ಜುಲೈ 2021, 19:40 IST

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನಕ್ಕೆವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ.

ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕತೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಸಂಕೀರ್ಣ ಸೇರಿದಂತೆ 22 ವಿಭಾಗಗಳಲ್ಲಿ ಕೃತಿಗಳನ್ನು ಆಹ್ವಾನಿಸಿದ್ದು, ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡಿದ ಒಂದು ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ.

ಕೃತಿಗಳು 2020ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಜನಪದ ಪ್ರಕಾರ ಹಾಗೂ ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. ಕೃತಿಯ ನಾಲ್ಕು ಪ್ರತಿಗಳನ್ನು ಸೆ.15ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, 560002 ಈ ವಿಳಾಸಕ್ಕೆ ಕಳುಹಿಸುವಂತೆ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ವಿವರಕ್ಕೆ: www.karnataka sahityaacademy.org

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.