ADVERTISEMENT

ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 20:02 IST
Last Updated 13 ಜನವರಿ 2022, 20:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ 2021–22ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

‘ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರು ಹಾಗೂ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಸಂಸ್ಥೆಗಳು ಸದರಿ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು’ ಎಂದು ಪ್ರಕಟಣೆ ತಿಳಿಸಿದೆ.

ಅರ್ಹರು ‘ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಎಚ್‌.ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು–560029’ ವಿಳಾಸಕ್ಕೆ ಇದೇ 14ರೊಳಗೆ ಭರ್ತಿ ಮಾಡಿದ ಅರ್ಜಿಗಳ ಮೂರು ಪ್ರತಿಯಲ್ಲಿ ಸಲ್ಲಿಸಬೇಕು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.