ADVERTISEMENT

ಐಪಿಎಲ್‌ ಕ್ರಿಕೆಟ್ ಬೆಟ್ಟಿಂಗ್: ಬೆಂಗಳೂರಿನ ಎರಡು ಕಡೆ ದಾಳಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2022, 20:41 IST
Last Updated 3 ಏಪ್ರಿಲ್ 2022, 20:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹ 3.35 ಲಕ್ಷ ಜಪ್ತಿ ಮಾಡಿದ್ದಾರೆ.

‘ಸಿಸಿಬಿ ಹಾಗೂ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ರಾಜಾಜಿನಗರ ಆರ್‌ಟಿಒ ಕಚೇರಿ ಬಳಿ ನಿಂತು ಬೆಟ್ಟಿಂಗ್ ಹಣ ಕಟ್ಟಿಸಿಕೊಳ್ಳುತ್ತಿದ್ದ ಪ್ರಶಾಂತ್ ಹಾಗೂ ಸಂತೋಷ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಂಡಗಳ ಸೋಲು–ಗೆಲುವಿನ ಲೆಕ್ಕಾಚಾರದಲ್ಲಿ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು’ ಎಂದೂ ತಿಳಿಸಿದರು.

‘ಉಪ್ಪಾರಪೇಟೆ ಠಾಣೆ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.