ADVERTISEMENT

ಬೆಂಗಳೂರು: ಮಗು ವಿಚಾರ; ಐಪಿಎಸ್ ವಿರುದ್ಧ ಐಎಫ್‌ಎಸ್‌ ದೂರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 17:06 IST
Last Updated 3 ಜೂನ್ 2021, 17:06 IST

ಬೆಂಗಳೂರು: ಐಪಿಎಸ್ ಅಧಿಕಾರಿ ವರ್ಟಿಕಾ ಕಟಿಯಾರ್ ಹಾಗೂ ಐಎಫ್‌ಎಸ್ ಅಧಿಕಾರಿ ನಿತೀನ್‌ ಸುಭಾಷ್ ದಂಪತಿ ಕೌಟುಂಬಿಕ ಜಗಳವು ಇದೀಗ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಮೆಟ್ಟಿಲೇರಿದೆ.

‘ಅಧಿಕಾರ ಹಾಗೂ ಪ್ರಭಾವ ಬಳಸಿಕೊಳ್ಳುತ್ತಿರುವ ಪತ್ನಿ ವರ್ಟಿಕಾ, ಮಗುವನ್ನು ನೋಡಲು ಬಿಡುತ್ತಿಲ್ಲ. ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ದಯವಿಟ್ಟು ಮಗು ನೋಡಲು ಅವಕಾಶ ಮಾಡಿಕೊಡಿ’ ಎಂದು ಕೋರಿ ನಿತೀನ್ ಅವರು ಆಯೋಗಕ್ಕೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕಳುಹಿಸಿರುವ ಆಯೋಗ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

2009ನೇ ವೃಂದದ ಐಪಿಎಸ್ ಅಧಿಕಾರಿ ವರ್ಟಿಕಾ ಹಾಗೂ ಭಾರತೀಯ ವಿದೇಶಾಂಗ ಸೇವೆಯ (ಐಎಫ್‌ಎಸ್‌) ಅಧಿಕಾರಿ ನಿತೀನ್ ಸುಭಾಷ್ ಅವರು 2011ರಲ್ಲಿ ಮದುವೆಯಾಗಿದ್ದರು.

ADVERTISEMENT

‘ಪತಿ ನಿತೀನ್ ಸುಭಾಷ್ ಹಾಗೂ ಅವರ ಮನೆಯವರು ನಿತ್ಯವೂ ಕಿರುಕುಳ ನೀಡುತ್ತಿದ್ದು, ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದಾರೆ. ದೈಹಿಕವಾಗಿ ಹಲ್ಲೆಯನ್ನೂ ಮಾಡಿ ಜೀವಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ವರ್ಟಿಕಾ ಕಟಿಯಾರ್ ಇತ್ತೀಚೆಗಷ್ಟೇ ಕಬ್ಬನ್‌ ಪಾರ್ಕ್‌ ಠಾಣೆಗೆ ದೂರು ನೀಡಿದ್ದರು. ಕೃತ್ಯ ನಡೆದ ಘಟನಾ ಸ್ಥಳದ ಆಧಾರದಲ್ಲಿ ದೂರನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.