ADVERTISEMENT

ಬೆಂಗಳೂರು | ಐಪಿಎಸ್‌ ಅಧಿಕಾರಿಗೆ ಕೋವಿಡ್‌ ಪಾಸಿಟಿವ್‌ 

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 6:25 IST
Last Updated 24 ಜೂನ್ 2020, 6:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ)ಯಲ್ಲಿ ಕಮಾಂಡೆಂಟ್‌ ಆಗಿ ಸೇವೆ ಸಲ್ಲಿಸುತ್ತಿರುವ 46 ವರ್ಷದ ಐಪಿಎಸ್‌ ಅಧಿಕಾರಿಯೊಬ್ಬರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಂಗಳವಾರ ರಾತ್ರಿ ವರದಿ ಪಾಸಿಟಿವ್‌ ಬಂದ ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿತ ಐಪಿಎಸ್‌ ಅಧಿಕಾರಿಯುಬೆಂಗಳೂರಿನ ಕೆಎಸ್‌ಆರ್‌ಪಿಯ ಕೆಳಹಂತದಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದರು.ಕ್ವಾರಂಟೈನ್‌ ಹಾಗೂ ಮಾನಸಿಕ ಆರೋಗ್ಯ ಬಗ್ಗೆ ಅವರು ಸಲಹೆ ನೀಡುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಕೆಎಸ್‌ಆರ್‌ಪಿ) ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಅಧಿಕಾರಿಗೆ ಸೋಂಕು ಹೇಗೆ ತಗುಲಿತುಎನ್ನುವುದನ್ನು ಪತ್ತೆಹಚ್ಚಲಾಗುತ್ತಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕಲಾಗಿದ್ದು, ಕುಟುಂಬ ಸದಸ್ಯರು, ಕಚೇರಿ ಸಿಬ್ಬಂದಿಯನ್ನು ಈಗಾಗಲೇ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಮತ್ತೆ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್‌: ಬೆಂಗಳೂರಿನ ಪಶ್ಚಿಮ ವಿಭಾಗದ ಕೆಂಗೇರಿ ಪೊಲೀಸ್‌ ಠಾಣೆಯ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ ಸೇರಿದಂತೆ ಸಿಟಿ ಮಾರ್ಕೆಟ್‌ ಪೊಲೀಸ್‌ ಠಾಣೆಯ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ (ಎಎಸ್‌ಐ), ಕಾನ್ಸ್‌ಸ್ಟೆಬಲ್‌ ಒಬ್ಬರಿಗೆ ಕೋವಿಡ್‌ ಸೋಂಕು ತಗುಲಿರುವುದು ಬುಧವಾರ ಬೆಳಿಗ್ಗೆ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.