ಬೆಂಗಳೂರು: ದೇಶದಲ್ಲಿ ಅಕ್ರಮವಾಗಿ ವಾಸವಿದ್ದ ಇರಾನ್ ಪ್ರಜೆ ಹಸೀಮ್ ಮಮ್ತಾಜ್ (32) ಎಂಬಾತನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ನಗರದ 56ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರವಾಸಿ ವೀಸಾದಡಿ ನಗರಕ್ಕೆ ಬಂದಿದ್ದ ಹಸೀಮ್, ಗಿರಿನಗರದಲ್ಲಿ ವಾಸವಿದ್ದ. ಆತನ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರು, ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗಲೇ ಆತನ ಅಕ್ರಮ ವಾಸ ಪತ್ತೆಯಾಗಿತ್ತು.
ವಿದೇಶಿಗರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಸ್ತಗೊಂಡ ಹಾಗೂ ಶರಣಪ್ಪ ವಾದಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.