ಟೋಯಿಂಗ್
ಬೆಂಗಳೂರು: ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.
ಕೆಂಗೇರಿ ಉಪನಗರದಲ್ಲಿ ಶನಿವಾರ ನಡೆದ ಸಂಚಾರ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾತನಾಡಿ, ನಗರದ ಹಲವು ಕಡೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಸಂಬಂಧ ದೂರುಗಳೂ ಬರುತ್ತಿವೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಚರ್ಚಿಸಲಾಗುತ್ತಿದೆ ಎಂದರು.
ಈ ಹಿಂದೆ ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿದ್ದಾಗ ಈ ರೀತಿಯ ಅವ್ಯವಸ್ಥೆ ಇರಲಿಲ್ಲ ಎಂದರು.
ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ ಬಿ.ಎಚ್.ಅನಿತಾ ಇದ್ದರು. ಹಲವು ವಿವಾದ ಹಾಗೂ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದರಿಂದ ಈ ಹಿಂದೆ ಟೋಯಿಂಗ್ ವ್ಯವಸ್ಥೆ ರದ್ದು ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.