ಬೆಂಗಳೂರು: ನಗರದ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಐಸಿರಿ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್ ಅವರು ಉದ್ಘಾಟಿಸಿದರು.
ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದರು. ಕಿರುತೆರೆ ನಟ ಅಶ್ವಿನ್ ಯಾದವ್ ಅವರು ಸಮಾರೋಪದಲ್ಲಿ ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು.
ಸಮಗ್ರ ವಿಜೇತ ತಂಡವಾಗಿ ಜ್ಯೋತಿ ನಿವಾಸ ಕಾಲೇಜು ಹಾಗೂ ಎರಡನೇ ಬಹುಮಾನವನ್ನು ಮೌಂಟ್ ಕಾರ್ಮೆಲ್ ಕಾಲೇಜು ಪಡೆದವು.
ಕನ್ನಡ ವಿಭಾಗದ ಡಾ. ಈರಯ್ಯ ಹಂಪಾಪುರ, ಡಾ. ಹನುಮಂತರಾಯಪ್ಪ, ಡಾ. ಪೂರ್ಣಿಮಾ ಬಿ.ಎನ್, ಡಾ.ಪೂರ್ಣಿಮಾ ಎಸ್. ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.