ADVERTISEMENT

ಹೈಕೋರ್ಟ್‌ಗೆ ಇ–ಮೇಲ್‌ನಲ್ಲಿ ಬೆದರಿಕೆ ಸಂದೇಶ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 20:05 IST
Last Updated 4 ಅಕ್ಟೋಬರ್ 2025, 20:05 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಇಸ್ರೇಲ್‌ ರಾಯಭಾರ ಕಚೇರಿ ಹಾಗೂ ಹೈಕೋರ್ಟ್‌ನಲ್ಲಿ ಸ್ಫೋಟಕ ಇರಿಸಿರುವುದಾಗಿ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಹಲಸೂರು ಹಾಗೂ ವಿಧಾನಸೌಧ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ADVERTISEMENT

ಇತ್ತೀಚೆಗೆ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಸ್ಥಳಕ್ಕೆ ತೆರಳಿ ಪೊಲೀಸರು ತಪಾಸಣೆ ನಡೆಸಿದಾಗ ಇದೊಂದು‌ ಹುಸಿ‌ ಬೆದರಿಕೆ ಎಂಬುದು ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಇಸ್ರೇಲ್ ರಾಯಭಾರ ಕಚೇರಿ ಹಾಗೂ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಇ–ಮೇಲ್ ಕಳುಹಿಸಿರುವ ಕಿಡಿಗೇಡಿ, ‘ಆವರಣದಲ್ಲಿ ಆರ್‌ಡಿಎಕ್ಸ್ ಇರಿಸಲಾಗಿದ್ದು, ಅದು ಸ್ಫೋಟ ಆಗಲಿದೆ’ ಎಂದು ಬರೆದಿದ್ದ. ಇ–ಮೇಲ್ ಕಳುಹಿಸಿದ್ದ ಖಾತೆಯ ಐಪಿ ವಿಳಾಸ ಪಡೆದುಕೊಳ್ಳಲಾಗಿದೆ. ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.