ಯಲಹಂಕ: ‘ಈ ವರ್ಷದ ಜನವರಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 100ನೇ ಮಿಷನ್ ‘ಜಿಎಸ್‌ಎಲ್‌ವಿ-ಎಫ್15’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವುದರೊಂದಿಗೆ ಭಾರತ, ಜಾಗತಿಕ ಬಾಹ್ಯಾಕಾಶ ಶಕ್ತಿಯಾಗಿ ಹೊರಹೊಮ್ಮುತ್ತಿದೆ’ ಎಂದು ಇಸ್ರೊ ಸಂಸ್ಥೆಯ ಅಧ್ಯಕ್ಷ ಡಾ.ವಿ.ನಾರಾಯಣನ್ ತಿಳಿಸಿದರು.
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಐಇಇಇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಐದು ದಶಕಗಳಲ್ಲಿ ಭಾರತದ ಬೆಳವಣಿಗೆಗೆ ಕೊಡುಗೆ ನೀಡುವ ಇಸ್ರೊ ಮೂಲಕ ಮಹತ್ವದ ಮೈಲುಗಲ್ಲುಗಳನ್ನು ಸಾಧಿಸಿದೆ. ಈ ಸಂಸ್ಥೆಯು ವಿಶ್ವದ ಅತ್ಯಂತ ಗೌರವಾನ್ವಿತ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದೆ’ ಎಂದರು.
ವಿಕಸಿತ ಭಾರತ-2047ರ ಕನಸು ವೇಗವಾಗಿ ವಾಸ್ತವಕ್ಕೆ ತಿರುಗುತ್ತಿದೆ. ಶೈಕ್ಷಣಿಕ ಸಂಶೋಧನೆ ಮತ್ತು ಉದ್ಯಮದಲ್ಲಿ ಜಾಗತಿಕ ನಾಯಕರನ್ನು ಒಟ್ಟುಗೂಡಿಸುವಲ್ಲಿ ಇಂತಹ ಸಮ್ಮೇಳನಗಳು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸ್ಸಾರ್ ಅಹಮದ್, ಪುದುಚೆರಿಯ ಎನ್‌ಐಟಿ ನಿರ್ದೇಶಕ ಮಕರಂದ್ ಮಾಧವ್ ಘಂಗ್ರೇಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.