ADVERTISEMENT

ಫ್ಲಿಪ್‌ಕಾರ್ಟ್‌, ಸ್ವಿಗ್ಗಿ ಕಚೇರಿಗಳಲ್ಲಿ ಐಟಿ ತಪಾಸಣೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:28 IST
Last Updated 7 ಜನವರಿ 2021, 19:28 IST

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ‘ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌’(ಐಟಿಸಿ)ನಲ್ಲಿ ವಂಚನೆ ನಡೆಯುತ್ತಿರುವ ಶಂಕೆಯ ಮೇಲೆ ಫ್ಲಿಪ್‌ಕಾರ್ಟ್‌ನ ಸಹೋದರ ಸಂಸ್ಥೆ ಇನ್ಸಾಕಾರ್ಟ್‌ ಮತ್ತು ಆಹಾರ ವಿತರಣಾ ಜಾಲ ಸ್ವಿಗ್ಗಿ ಕಚೇರಿಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಪಾಸಣೆ ನಡೆಸಿದ್ದಾರೆ.

ಅಕ್ರಮವಾಗಿ ‘ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌’ ಪಡೆಯುವ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ ನೀಡಿದ್ದ ಮಾಹಿತಿ ಆಧಾರದಲ್ಲಿ ದೇಶದಾದ್ಯಂತ ವಿವಿಧೆಡೆ ತಪಾಸಣೆಗಳನ್ನು ನಡೆಸಲಾಗಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ಇನ್ಸಾಕಾರ್ಟ್‌ ಮತ್ತು ಸ್ವಿಗ್ಗಿ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳ ತಪಾಸಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಅಗತ್ಯವಿರುವ ಎಲ್ಲ ದಾಖಲೆಗಳನ್ನೂ ಪರಿಶೀಲನೆ ವೇಳೆ ಒದಗಿಸಲಾಗಿದೆ ಎಂದು ಎರಡೂ ಕಂಪನಿಗಳ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.