ADVERTISEMENT

ಮಧ್ಯದಲ್ಲೇ ಬಿ.ಎಸ್.ಯಡಿಯೂರಪ್ಪ ಅವರನ್ನು ಕೈಬಿಡುವುದು ಸರಿಯಲ್ಲ: ಸಿದ್ದಗಂಗಾ ಶ್ರೀ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 10:19 IST
Last Updated 21 ಜುಲೈ 2021, 10:19 IST
ಸಿದ್ದಗಂಗಾ ಮಠಾಧೀಶರ ಜತೆ ಇತರ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಸಿದ್ದಗಂಗಾ ಮಠಾಧೀಶರ ಜತೆ ಇತರ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.   

ಬೆಂಗಳೂರು: ಸಿದ್ದಗಂಗಾ ಮಠಾಧೀಶರ ಜತೆ ಇತರ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜಕೀಯದ ಬಗ್ಗೆ ಚರ್ಚಿಸಿ, ಅವರಿಗೆ ಬೆಂಬಲ ಸೂಚಿಸಿದರು.

ಬಿಜೆಪಿ ವರಿಷ್ಠರು ಮಧ್ಯದಲ್ಲೇ ಯಡಿಯೂರಪ್ಪ ಅವರನ್ನು ಕೈ ಬಿಡುವುದು ಸರಿಯಲ್ಲ. ಪ್ರವಾಹ ಕೊರೊನ ಮಧ್ಯೆ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಅವಧಿ ಪೂರ್ಣಗೊಳಿಸಲು ಬಿಡಬೇಕಿತ್ತು ಎಂದು ಸಿದ್ದಗಂಗಾ ಶ್ರೀಗಳು ತಿಳಿಸಿದರು.

ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಸಿಎಂ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದರು.

ADVERTISEMENT

ಬಿಜೆಪಿಯಲ್ಲಿ 75 ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ ಅವಧಿ ಪೂರೈಸುವವರೆಗೆ ಯಡಿಯೂರಪ್ಪ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.