
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ವಿವಿಧೆಡೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿಬುಧವಾರ ಮಧ್ಯರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದಾರೆ. ಹಲವು ಉದ್ಯಮಿಗಳ ಮನೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಿದ ಐಟಿ ಇಲಾಖೆ ಅಧಿಕಾರಿಗಳು, ಗುರುವಾರ ಮುಂಜಾನೆಯವರೆಗೂ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದರು.
ಜಯನಗರಸೌತ್ ಎಂಡ್ ಸರ್ಕಲ್ ಬಳಿ ಇರುವ ಜೋಳ ಮತ್ತು ಪಾಪ್‌ಕಾರ್ನ್ ವ್ಯಾಪಾರ ಮಾಡುವ ಉದ್ಯಮಿ ಸಿದ್ದಿಕ್ ಶೇಠ್ ಮನೆಗೆ ನಾಲ್ಕು ವಾಹನಗಳಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ವಹಿವಾಟು ದಾಖಲೆ ಪರಿಶೀಲಿಸಿದರು.
ನಗರದ ಎಚ್‌ಎಸ್ಆರ್ ಲೇಔಟ್, ಜಯನಗರ, ಬಸವನಗುಡಿ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ತೆರಿಗೆ ವಂಚನೆ ಕುರಿತು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ:ಗುರುವಾರಐಟಿ ದಾಳಿ ಸಾಧ್ಯತೆ–ಎಚ್.ಡಿ.ಕುಮಾರಸ್ವಾಮಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.