ADVERTISEMENT

ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಕಂಪನಿಗಳ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2023, 16:25 IST
Last Updated 12 ಅಕ್ಟೋಬರ್ 2023, 16:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸರ್ಕಾರದ ಹಲವು ಕಾಮಗಾರಿಗಳನ್ನು ಗುತ್ತಿಗೆ ಪಡೆದಿದ್ದ ಎರಡು ಕಂಪನಿಗಳಿಗೆ ಸಂಬಂಧಪಟ್ಟ 25 ಸ್ಥಳಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಗುರುವಾರ ದಾಳಿ ಮಾಡಿ, ಶೋಧ ನಡೆಸಿದರು.

ತೆರಿಗೆ ವಂಚನೆ ಆರೋಪದಡಿ ಐಟಿ ಅಧಿಕಾರಿಗಳು ಈ ದಾಳಿ ನಡೆಸಿದರು. ಸಹಕಾರನಗರ, ಸಂಜಯನಗರ ಹಾಗೂ ಇತರೆ ಸ್ಥಳಗಳಲ್ಲಿರುವ ಕಂಪನಿ ಕಚೇರಿ ಹಾಗೂ ಕಂಪನಿಗೆ ಸಂಬಂಧಪಟ್ಟ ವ್ಯಕ್ತಿಗಳ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ADVERTISEMENT

ಕಂಪನಿಯ ವಹಿವಾಟಿಗೆ ಸಂಬಂಧಪಟ್ಟ ದಾಖಲೆಗಳನ್ನು ಸುಪರ್ದಿಗೆ ಪಡೆದು ಮಾಹಿತಿ ಕಲೆ ಹಾಕಿದರು. ಕಂಪನಿಗಳಿಗೆ ಸಂಬಂಧಪಟ್ಟ ಆಡಳಿತ ಮಂಡಳಿ ಸದಸ್ಯರು ಹಾಗೂ ಇತರರ ಮನೆಗಳಲ್ಲಿಯೂ ಶೋಧ ನಡೆಯಿತು. ಶೋಧದ ಸಂದರ್ಭದಲ್ಲಿ ನಗದು ಹಾಗೂ ಹಲವು ದಾಖಲೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವುದಾಗಿ ಗೊತ್ತಾಗಿದೆ.

ಬೆಂಗಳೂರಿನ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಇದೇ ಎರಡು ಕಂಪನಿಗಳು ಇತ್ತೀಚೆಗಷ್ಟೇ ಗುತ್ತಿಗೆ ಪಡೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.