
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾ. 1ರಂದು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ವಿಭಾಗದ ಅಧ್ಯಕ್ಷ ಜಿ. ಮನೋಹರ್ ಅಬ್ಬಿಗೆರೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾ.1ರಂದು ಬೆಳಿಗ್ಗೆ 10ಗಂಟೆಗೆ ಹಡ್ಸನ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ರೇಣುಕಾಚಾರ್ಯರ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಶಿವರಾಜ ಎಸ್. ತಂಗಡಗಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.