ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ ಸಂಬಂಧ ಅಪರಿಚಿತರ ವಿರುದ್ಧ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸವಲಿಂಗಪ್ಪ ನಗರದ ಮೊಹಮ್ಮದ್ ಜಮೀರ್ ಪಾಷಾ ಹಾಗೂ ವಾಸೀಂ ಅವರು ನೀಡಿದ ದೂರಿನ ಮೇರೆಗೆ ಆರು ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಜೂನ್ 22ರಂದು ಸಂಪಿಗೇಹಳ್ಳಿ ಮುಖ್ಯರಸ್ತೆಯ ಮೂಲಕ ಚೊಕ್ಕನಹಳ್ಳಿಯ ಕಡೆಗೆ ಆಟೊದಲ್ಲಿ ತೆರಳುತ್ತಿದ್ದೆವು. ದಾರಿ ಮಧ್ಯೆ ನೀಲಗಿರಿ ತೋಪಿನ ಬಳಿ ಮೂತ್ರ ವಿಸರ್ಜನೆಗೆ ಆಟೊ ನಿಲ್ಲಿಸಲಾಗಿತ್ತು. ಸ್ಥಳಕ್ಕೆ ಬಂದ ಆರು ಮಂದಿ, ನಮ್ಮನ್ನು ನಿಂದಿಸಿ ಹಲ್ಲೆ ನಡೆಸಿದರು. ವಸೀಂ ಮೇಲೆ ಕೋಲಿನಿಂದ ಹಲ್ಲೆ ನಡೆಸಿದಾಗ ನೋವು ತಾಳಲಾರದೇ ಅಲ್ಲಾಹು ಎಂದು ಕೂಗಿದ. ಅದಕ್ಕೆ ಪ್ರತಿಯಾಗಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಆರೋಪಿಗಳು ಬೆದರಿಕೆ ಹಾಕಿದರು’ ಎಂದು ನೀಡಿದ ದೂರು ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.