
ಪ್ರಜಾವಾಣಿ ವಾರ್ತೆಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್‌ಗಳಲ್ಲಿ ಭಾನುವಾರ ನಡೆದ ತಪಾಸಣೆ ವೇಳೆ ಮೊಬೈಲ್ ಪತ್ತೆಯಾಗಿದೆ.
‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ ಅಡಿ ಸಹಾಯಕ ಜೈಲರ್ ಎಸ್.ಜೆ.ಜಕಾತಿ ನೇತೃತ್ವದಲ್ಲಿ ತಪಾಸಣೆ ಕೈಗೊಂಡಾಗ ಟವರ್ ಒಂದು ವಿಭಾಗದ 9ನೇ ಬ್ಯಾರಕ್‌ನ ಕೊಠಡಿ ಸಂಖ್ಯೆಯ ಎರಡರಲ್ಲಿ ಕೈದಿ ಗಿಪ್ಸಾನಾ ಡ್ಯಾನಿಯಲ್ ಬಳಿ ಮೊಬೈಲ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ.
ಮೊಬೈಲ್ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುವನ್ನು ಕಾರಾಗೃಹದಲ್ಲಿ ಉಪಯೋಗಿಸಿದವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.